ಮಂಜೇಶ್ವರದ ಎಸ್ ಎ ಟಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ 2018
ಮಂಜೇಶ್ವರದ ಎಸ್ ಎ ಟಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ತಾರೀಕು 21-6-18 ಗುರುವಾರ ಶಾಲೆಯ ಅನಂತ ಜ್ಞಾನ ಸಭಾಂಗಣದಲ್ಲಿ ಜರುಗಿತು.
ಜಮುನಾ ಸೇವಾ ಸಂಘದ ಕಾಸರಗೋಡು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀ ಸದಾಶಿವ ಕಡಂಬಾರು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಯೋಗದಿನವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದರು. ಮುಖ್ಯೋಪಾಧ್ಯಾಯರಾದ ಮುರಳಿ ಕೃಷ್ಣರವರು ಅಧ್ಯಕ್ಷತೆ ವಹಿಸಿದ್ದರು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ತೇಜಸ್ ಕಿರಣ್, ಸಿಬ್ಬಂದಿ ಕಾರ್ಯದರ್ಶಿ ಶ್ರೀಮತಿ ಸುಕನ್ಯಾ ಶಾಲೆಯ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ದೈಹಿಕ ಶಿಕ್ಷಕ ಶ್ಯಾಮ್ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿ, ಅಧ್ಯಾಪಕರಾದ ಲಕ್ಮೀದಾಸ್ ವಂದಿಸಿದರು. ಅಧ್ಯಾಪಕರಾದ ಈಶ್ವರ ಕಿದೂರು, ಪೂರ್ಣಿಮಾ ನಾಯಕ್, ಮಹೇಶ ಕೆ ವಿ, ಶಾಂತಾರಾಮ, ಗಣೇಶ್ ನಾಯಕ್, ಮಲ್ಲಿಕಾ ಮೊದಲಾದವರು ಉಪಸ್ಥಿತರಿದ್ದರು. ಮಕ್ಕಳಿಗೆ ಯೋಗ ದಿನದ ಮಹತ್ವವನ್ನು ಸಂಪನ್ಮೂಲ ವ್ಯಕ್ತಿ ಸದಾಶಿವ ಕಡಂಬಾರು ವಿವರಿಸಿ, ಯೋಗಗಳ ಪ್ರಾತ್ಯಕ್ಷಿಕೆ ನೀಡಿದರು.
No comments:
Post a Comment